Friday, January 2, 2009

ಸ್ವತಂತ್ರ ತಂತ್ರಾಂಶ ಎಂದರೇನು?

ವಿಶ್ವ ಸ್ವತಂತ್ರ ತಂತ್ರಾಂಶ ಚಳುವಳಿಯ ಜನಕ ರಿಚರ್ಡ್ ಸ್ಟಾಲ್ ಮನ್


ಸ್ವತಂತ್ರ ತಂತ್ರಾಂಶ (Free Software)ಎಂದರೆ, ನಕಲು ಮಾಡುವ, ಮೂಲ ತಂತ್ರಾಂಶದೊಂದಿಗೆ ವಿತರಿಸುವ, ಮಾರ್ಪಡಿಸುವ ಮತ್ತು ಹೊಸ ಕ್ಷೇತ್ರಕ್ಕೆ ಅನ್ವಯಿಸುವ ಎಲ್ಲ ಸ್ವಾತಂತ್ರ್ಯಗಳನ್ನು ಅದು ಬಳಕೆದಾರರಿಗೆ ನೀಡುತ್ತದೆ. ಆದರೆ, ಮಾಲೀಕತ್ವದ ಸಾಫ್ಟ್ ವೇರ್ (Proprietary software) ಮೂಲ ಸಂಕೇತಗಳನ್ನು (Source Code) ಬಳಕೆದಾರರಿಗೆ ನಿರಾಕರಿಸುವ ಮೂಲಕ ಎಲ್ಲ ಸ್ವಾತಂತ್ರ್ಯಗಳನ್ನು ಹತ್ತಿಕ್ಕುತ್ತವೆ.